Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:28 - ಪರಿಶುದ್ದ ಬೈಬಲ್‌

28 ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಚೊರ್ ಚೊರಿಕರ್ತಲೆ ಸೊಡುನ್ ಘೊಳುನ್ ಜಮ್ವುನ್ದಿತ್; ತೊ ಅಪ್ಲಿ ಹಾತಾ ಬರ್‍ಯಾ ಕಾಮಾಕ್ನಿ ವಾಪ್ರುನ್ ಘೆಂವ್ದಿತ್, ತನ್ನಾ ಗರಿಬಾಕ್ನಿ ಮಜ್ಜತ್ ಕರುಕ್ ತೆಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:28
33 ತಿಳಿವುಗಳ ಹೋಲಿಕೆ  

ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.


ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.


ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.


ದುರಾಶೆಯುಳ್ಳವನು ಹೆಚ್ಚುಹೆಚ್ಚು ಅಪೇಕ್ಷಿಸುತ್ತಲೇ ಇರುವನು, ಆದರೆ ನೀತಿವಂತನು ಉದಾರವಾಗಿ ಕೊಡುವನು.


ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು