ಎಫೆಸದವರಿಗೆ 4:30 - ಪರಿಶುದ್ದ ಬೈಬಲ್30 ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ದೆವಾಚ್ಯಾ ಪವಿತ್ರ್ ಆತ್ಮ್ಯಾಕ್ ಮನ್ ದುಖ್ವು ನಕಾಸಿ, ತುಮಿ ದೆವಾಚಿ ಲೊಕಾ ಮನ್ತಲ್ಯಾಕ್ ತೊಚ್ ದೆವಾಚಿ ಗೊಸ್ಟ್ ಹೊವ್ನ್ ಹಾಯ್, ಸಮಾ ಎಳಾರ್ ಸುಟ್ಕಾ ಕರ್ತಾ ಮನ್ತಲೆ ದಾಕ್ವು ಸಾಟ್ನಿ ದೆವಾನ್ ತುಮ್ಕಾ ತೆಕಾ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.