ಎಫೆಸದವರಿಗೆ 4:31 - ಪರಿಶುದ್ದ ಬೈಬಲ್31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಸಗ್ಳೆ ಕುಶ್ಡೆಪಾನ್, ರಾಗ್ ಖುದ್ಗೆಪಾನ್, ಝಗ್ಡೆ, ಗಾಳ್ಯಿಯಾ ಹೆ ಸಗ್ಳ್ಯಾ ನಮನಿಚೆ ಬುರ್ಶೆಪಾನ್ ತುಮ್ಚ್ಯಾಕ್ನಾ ಧುರ್ ಕರಾ. ಅಧ್ಯಾಯವನ್ನು ನೋಡಿ |
ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ!
ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.