ಎಫೆಸದವರಿಗೆ 4:4 - ಪರಿಶುದ್ದ ಬೈಬಲ್4 ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತುಮ್ಕಾ ಎಕುಚ್ ಬರೊಸೊ ದೆವಾಕ್ನಾ ಬಲ್ವಲ್ಲ್ಯಾ ತನ್ನಾ ಹೊತ್ತ್ಯಾ ಸಾರ್ಕೆ ಎಕುಚ್ ಆಂಗ್ ಅನಿ ಎಕುಚ್ ಪವಿತ್ರ್ ಆತ್ಮೊ ಹಾಯ್, ಅಧ್ಯಾಯವನ್ನು ನೋಡಿ |
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.