Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:8 - ಪರಿಶುದ್ದ ಬೈಬಲ್‌

8 ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ - ಆತನು ಉನ್ನತಸ್ಥಾನಕ್ಕೆ ಏರಿದಾಗ ತಾನು ಜಯಿಸಿದ್ದ ಬಹುಜನರನ್ನು ಸೆರೆಹಿಡುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಮಾಡಿದನು ಎಂಬದಾಗಿ ಪ್ರವಾದಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಚ್ಯಾ ಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ, “ತೊ ವೈಲ್ಯಾ ಜಾಗ್ಯಾರ್ ಗೆಲ್ಲ್ಯಾ, ತನ್ನಾ ಅಪ್ನಾಚ್ಯಾ ವಾಂಗ್ಡಾ ಲೈ ಲೊಕಾಕ್ನಿ ಧರುನ್ ಬಂಧಿಕರುನ್ ಹಾನ್ಲ್ಯಾನ್, ಅನಿ ತೆನಿ ಲೊಕಾಕ್ನಿ ದೆನೆ ದಿಲ್ಯಾನ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:8
7 ತಿಳಿವುಗಳ ಹೋಲಿಕೆ  

ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.


ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.


ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


“ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು