ಎಫೆಸದವರಿಗೆ 5:10 - ಪರಿಶುದ್ದ ಬೈಬಲ್10 ಪ್ರಭುವಿಗೆ ಯಾವುದು ಮೆಚ್ಚಿಕೆಯಾದದ್ದೆಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬದನ್ನು ಪರಿಶೋಧಿಸಿ ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಧನಿಯಾಕ್ ಮೆಚ್ಕಿಚೆ ಕಾಮ್ ಖಲೆ ಮನುನ್ ಕಳ್ವುನ್ ಘೆವ್ಕ್ ಕಟ್ಪಟ್ ಕರಾ. ಅಧ್ಯಾಯವನ್ನು ನೋಡಿ |
ದಾವೀದನು ಕತ್ತಿಯನ್ನು ಸಿಕ್ಕಿಸಿಕೊಂಡು, ಆ ಕಡೆ ಈ ಕಡೆ ಸುತ್ತಾಡಿದನು. ಸೌಲನ ಯುದ್ಧ ವಸ್ತ್ರಗಳನ್ನು ದಾವೀದನು ಧರಿಸಲು ಪ್ರಯತ್ನಿಸಿದನು. ಆದರೆ ದಾವೀದನಿಗೆ ಅಂತಹ ಭಾರದ ವಸ್ತ್ರಗಳನ್ನು ಧರಿಸಿ ಅಭ್ಯಾಸವಿರಲಿಲ್ಲ. ದಾವೀದನು ಸೌಲನಿಗೆ, “ನಾನು ಇವುಗಳನ್ನು ಧರಿಸಿಕೊಂಡು ಹೋರಾಡಲಾಗುವುದಿಲ್ಲ; ನನಗೆ ಇವುಗಳನ್ನು ಧರಿಸಿಕೊಂಡು ಅಭ್ಯಾಸವಿಲ್ಲ” ಎಂದು ಹೇಳಿ ಅವುಗಳನ್ನೆಲ್ಲ ತೆಗೆದು ಹಾಕಿದನು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?