Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:11 - ಪರಿಶುದ್ದ ಬೈಬಲ್‌

11 ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಾಳ್ಕಾತ್ಲಿ ಲೊಕಾ ಕರ್ತಲಿ ಕಾಮಾ ಕರುನಕಾಸಿ ತೆಜ್ಯಾನ್ ಕಾಯ್ಬಿ ಬರೆ ಹೊಯ್ನಾ, ಖರೆ ಕಳ್ಕಾತ್ ಕರ್ತಲಿ ಕಾಮಾ ಚುಕೆಚಿ ಮನುನ್ ದಾಕ್ವುಕ್ ಸಾಟ್ನಿ ತುಮಿ ಬರಿ ಕಾಮಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:11
48 ತಿಳಿವುಗಳ ಹೋಲಿಕೆ  

“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.


ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.


ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.


ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.


ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.


“ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.


ನಿದ್ದೆ ಮಾಡುವ ಜನರು ರಾತ್ರಿಯಲ್ಲಿ ನಿದ್ರಿಸುತ್ತಾರೆ. ಕುಡಿದು ಅಮಲೇರುವವರು ರಾತ್ರಿಯಲ್ಲಿ ಕುಡಿದು ಅಮಲೇರುತ್ತಾರೆ.


ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.


ಆದ್ದರಿಂದ ನೀವು ಅಂಥ ಜನರೊಂದಿಗೆ ಪಾಲುಗಾರರಾಗಬೇಡಿ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.


ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.


“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಷ್ಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು.


ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.


ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು