Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:24 - ಪರಿಶುದ್ದ ಬೈಬಲ್‌

24 ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಿರಲಿ; ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚ್ಯಾ ಲೊಕಾಂಚೊ ತಾಂಡೊ ಕ್ರಿಸ್ತಾಚ್ಯಾ ಖಾಲ್ತಿ ಹೊವ್ನ್ ಹಾಯ್, ಹ್ಯೊ ನೆಮ್ ಬಾಯ್ಕೊ ಮಾನ್ಸಾಕ್ನಿ ದಿವ್ನ್ ಹೊತಾ ಹರ್ ಎಕ್ ವಿಶಯಾತ್ಬಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ರ್‍ಹಾವ್ಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:24
10 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು.


ಗುಲಾಮರಿಗೆ ಈ ಸಂಗತಿಗಳನ್ನು ತಿಳಿಸು: ಅವರು ತಮ್ಮ ಯಜಮಾನರಿಗೆ ಯಾವಾಗಲೂ ವಿಧೇಯರಾಗಿದ್ದು ಅವರನ್ನು ಮೆಚ್ಚಿಸಲು ಪ್ರಯತ್ನಿಸಬೇಕು. ಅವರು ತಮ್ಮ ಯಜಮಾನರ ಜೊತೆಯಲ್ಲಿ ವಾಗ್ವಾದ ಮಾಡಬಾರದು;


ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.


“ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.


ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು