ಎಫೆಸದವರಿಗೆ 6:1 - ಪರಿಶುದ್ದ ಬೈಬಲ್1 ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪೊರಾನು, ಧನಿಯಾಚ್ಯಾ ಇಚ್ಛ್ಯಾ ಸಾರ್ಕೆ ತುಮ್ಚ್ಯಾ ಬಾಯ್ ಬಾಬಾಕ್ನಿ ಖಾಲ್ತಿ ಹೊವ್ನ್ ರಾವಾ, ಹೆ ತುಮಿ ಕರ್ತಲೆ ಸಮಾ ಹಾಯ್. ಅಧ್ಯಾಯವನ್ನು ನೋಡಿ |
‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.