Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:15 - ಪರಿಶುದ್ದ ಬೈಬಲ್‌

15 ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಸಮಾಧಾನಾಚಿ ಬರಿ ಖಬರ್ ಸಾಂಗುಕ್ ತಯಾರ್ ಹೊಲ್ಲೊ ಮನ್ ಮನ್ತಲಿ ಪಾಂಯಾಕ್ನಿ ರಾಕನ್ ಕರುಕ್ ಹೊನಯಾ ನೆಸುನ್ ಘೆವ್ನ್ ಘಟ್ ಇಬೆ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:15
8 ತಿಳಿವುಗಳ ಹೋಲಿಕೆ  

ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.


“ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.


ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ಪಾದರಕ್ಷೆಗಳನ್ನು ತೊಟ್ಟುಕೊಳ್ಳಿರಿ. ನೀವು ಧರಿಸಿಕೊಂಡಿರುವ ಉಡುಪೇ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು