ಎಫೆಸದವರಿಗೆ 6:18 - ಪರಿಶುದ್ದ ಬೈಬಲ್18 ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮಿ ಪವಿತ್ರ್ ಆತ್ಮ್ಯಾಚ್ಯಾ ಮಜ್ಜತಿನ್ ಸಗ್ಳ್ಯಾ ವೆಳಾರ್ಬಿ ದೆವಾಕ್ಡೆ ಮಾಗ್ನೆ ಕರುಂಗೆತ್, ಹರ್ ಎಕ್ ಮಾಗ್ನಿಬಿ ಕರಾ ತುಮ್ಕಾ ಪಾಜೆ ಹೊಲ್ಲೆ ಸಗ್ಳೆ ಮಾಗುನ್ ಘೆವಾ ಮಾಗ್ನೆ ಕರುಕ್ ಕನ್ನಾಬಿ ತಯಾರ್ ಹೊವ್ನ್ ರಾವಾ ಮಾಗ್ನೆ ಕರ್ತಲೆ ಸೊಡುನ್ ದಿವ್‍ನಕಾಸಿ, ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಸಗ್ಳ್ಯಾ ವೆಳಾರ್ಬಿ ಮಾಗ್ನೆ ಕರಾ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.