Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:19 - ಪರಿಶುದ್ದ ಬೈಬಲ್‌

19 ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಮಾಜ್ಯಾ ಸಾಟ್ನಿಬಿ ಮಾಗ್ನೆ ಕರಾ, ಮಿಯಾ ಬೊಲ್ತಾನಾ ಬರ್‍ಯಾ ಖಬ್ರಿಯಾಂಚ್ಯಾ ಗುಟ್ಟಾಚೆ ಖರೆಪಾನ್ ಬಿಂಯೆ ನಸ್ತಾನಾ ಕಳ್ವುಕ್ ಪಾಜೆ ಹೊಲ್ಲೆ ಬೊಲ್ನೆ ದೆವಾಕ್ನಾ ಮಾಕಾ ಗಾಯ್ ಸಾರ್ಕೆ ಮಾಗ್ನೆ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:19
34 ತಿಳಿವುಗಳ ಹೋಲಿಕೆ  

ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.


ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ.


ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.


ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.


ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.


ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು