Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:20 - ಪರಿಶುದ್ದ ಬೈಬಲ್‌

20 ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬರಿ ಖಬರ್ ಪರ್ಗಟ್ತಲೆಚ್ ಮಾಜೆ ಕಾಮ್ , ಹೊಲ್ಯಾರ್ಬಿ ಅತ್ತಾ ಬಂಧಿಖಾನ್ಯಾತ್ ಹಾಂವ್ ಮಿಯಾ ಸಮಾಕರುನ್ ಬರಿ ಖಬರ್ ಸಾಂಗ್ತಲೆ ಮಾಜೆ ಕಾಮ್ ಕರಿಸಾರ್ಕೆ ಮಾಜ್ಯಾ ಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:20
31 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.


ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಆದರೆ ಕಿವಿಗೊಟ್ಟು ಕೇಳಿಸಿಕೊ, ದೂತರು ಹೊರಗೆ ಅಳುತ್ತಿದ್ದಾರೆ. ಸಮಾಧಾನದ ಸಮಾಚಾರವನ್ನು ತರುವವರು ಗಟ್ಟಿಯಾಗಿ ರೋಧಿಸುತ್ತಿದ್ದಾರೆ.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು