ಎಫೆಸದವರಿಗೆ 6:21 - ಪರಿಶುದ್ದ ಬೈಬಲ್21 ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅಮ್ಚೊ ಪ್ರೆಮಾಚೊ ಭಾವ್ ತುಖಿಕಾ ಮನ್ತಲ್ಯಾಕ್ ತುಮ್ಚ್ಯಾಕ್ಡೆ ಧಾಡುನ್ ದಿವ್ಲಾ, ತೊ ಧನಿಯಾಚ್ಯಾ ಸೆವಾತ್ ವಿಶ್ವಾಸಾಚೊ ಸೆವಕ್ ಹೊವ್ನ್ ಹಾಯ್, ಹಿತ್ಲಿ ಸಂಗ್ತಿಯಾ ಸಗ್ಳಿ ತೊ ತುಮ್ಕಾ ಕಳ್ವುತಾ. ಮಿಯಾ ಹಿತ್ತೆ ಕಸೊ ಹಾಯ್, ಅನಿ ಕಾಯ್ ಕರುಲ್ಲಾ ಮನ್ತಲೆ ತನ್ನಾ ತುಮ್ಕಾ ಕಳ್ತಾ. ಅಧ್ಯಾಯವನ್ನು ನೋಡಿ |
ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.