Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:22 - ಪರಿಶುದ್ದ ಬೈಬಲ್‌

22 ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮ್ಚಿ ಪರಿಸ್ತಿತಿ ತುಮ್ಕಾ ಗೊತ್ತ್ ರ್‍ಹಾವ್ಚೆ ಮನ್ತಲಿ ಮಾಜಿ ಆಶ್ಯಾ, ಅನಿ ತೆಚ್ಯಾ ವೈನಾ ತುಮ್ಕಾ ಉಮ್ಮೆದ್ ಭರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:22
7 ತಿಳಿವುಗಳ ಹೋಲಿಕೆ  

ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.


ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು