Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:9 - ಪರಿಶುದ್ದ ಬೈಬಲ್‌

9 ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಯಜಮಾನಾನು, ತಸೆಚ್ ತುಮಿಬಿ ತುಮ್ಚ್ಯಾ ಸೆವಾಕಾಕ್ನಿ ಬರಿ ಮಾನ್ಸಾ ಹೊವ್ನ್ ರಾವಾ, ತೆಂಕಾ ಭಿಂಯೆ ಕರಿಸಾರ್ಕೆ ಬೊಲುನಕಾಸಿ, ತುಮ್ಕಾಬಿ, ಅನಿ ತೆಂಕಾಬಿ ರಾಜಾ ಹೊಲ್ಲೊ ಹೊತ್ತೊ ಸರ್‍ಗಾತ್ ಹಾಯ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೊ ಹರ್ ಎಕ್ಲ್ಯಾಕ್ಬಿ ಮೊಟೊ ಬಾರಿಕ್ ಮನುನ್ ಬಗಿನಸ್ತಾನಾ ಝುಡ್ತಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:9
40 ತಿಳಿವುಗಳ ಹೋಲಿಕೆ  

ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ.


ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.


ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.


“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


“ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?


ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.


“ಬಳಿಕ ರಾಜನು ತನ್ನ ಸೇವಕರಿಗೆ, ‘ಮದುವೆ ಊಟ ಸಿದ್ಧವಾಗಿದೆ. ನಾನು ಆಹ್ವಾನಿಸಿದ್ದ ಜನರು ಊಟಕ್ಕೆ ಬರುವಷ್ಟು ಒಳ್ಳೆಯವರಾಗಿರಲಿಲ್ಲ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು