ಎಸ್ತೇರಳು 1:1 - ಪರಿಶುದ್ದ ಬೈಬಲ್1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು. ಅಧ್ಯಾಯವನ್ನು ನೋಡಿ |
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.