10-11 ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.
10 ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
10-11 ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.
ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.
ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.
ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.
ಅನ್ನಪಾನಗಳನ್ನು ತೆಗೆದುಕೊಂಡು ಸಂತೃಪ್ತನಾಗಿದ್ದ ಬೋವಜನು ಧಾನ್ಯದ ರಾಶಿಯ ಹತ್ತಿರ ಮಲಗಲು ಹೋದನು. ಆಗ ರೂತಳು ರಹಸ್ಯವಾಗಿ ಬಂದು ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅವನ ಪಾದಗಳ ಬಳಿಯಲ್ಲಿಯೇ ಮಲಗಿದಳು.
ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.