ಎಸ್ತೇರಳು 1:13 - ಪರಿಶುದ್ದ ಬೈಬಲ್13-14 ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು. ಅಧ್ಯಾಯವನ್ನು ನೋಡಿ |
ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.