Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:15 - ಪರಿಶುದ್ದ ಬೈಬಲ್‌

15 “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:15
4 ತಿಳಿವುಗಳ ಹೋಲಿಕೆ  

ಹಾಮಾನನು ಒಳಗೆ ಪ್ರವೇಶಮಾಡುವಾಗ ಅರಸನು, “ಹಾಮಾನನೇ, ಅರಸನು ಒಬ್ಬನಿಗೆ ಗೌರವಿಸಬೇಕೆಂದು ಇಚ್ಫಿಸುವಾಗ ಯಾವ ರೀತಿಯಲ್ಲಿ ಅದನ್ನು ಮಾಡಬೇಕು?” ಎಂದು ಕೇಳಿದನು. ಆಗ ಹಾಮಾನನು, “ಅರಸನು ಗೌರವಿಸುವವನು ನನಗಿಂತ ಹೆಚ್ಚಿನವನು ಯಾರಿರಬಹುದು? ಅವನು ನನ್ನ ವಿಚಾರವಾಗಿಯೇ ನೆನಸುತ್ತಿರಬಹುದು” ಎಂದು ತನ್ನ ಮನಸ್ಸಿನಲ್ಲಿಯೇ ನೆನೆಸಿಕೊಂಡು


ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.


ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು