Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:17 - ಪರಿಶುದ್ದ ಬೈಬಲ್‌

17 ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ವೇರೋಷನು ರಾಣಿ ವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರನ್ನು ತಿರಸ್ಕರಿಸುವದಕ್ಕೆ ಕಾರಣವಾಗುವದು. ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:17
5 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.


ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.


ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು.


“ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು