Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:19 - ಪರಿಶುದ್ದ ಬೈಬಲ್‌

19 “ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:19
10 ತಿಳಿವುಗಳ ಹೋಲಿಕೆ  

ಈಗ ಇನ್ನೊಂದು ರಾಜಾಜ್ಞೆಯನ್ನು ಬರೆಯಿಸಲು ನಾನು ನಿಮಗೆ ಅಧಿಕಾರ ಕೊಡುತ್ತೇನೆ. ನಿಮಗೆ ಸರಿತೋಚುವ ರೀತಿಯಲ್ಲಿ ಯೆಹೂದ್ಯರಿಗೆ ಸಹಾಯವಾಗುವಂತೆ ಆ ಆಜ್ಞೆಯನ್ನು ರಾಜನ ಅಧಿಕಾರದೊಡನೆ ಬರೆಯಿಸಿ, ರಾಜನ ಉಂಗುರದಿಂದ ಮುದ್ರೆ ಒತ್ತಿರಿ. ರಾಜ ಮುದ್ರೆಯುಳ್ಳ ಯಾವ ಆಜ್ಞೆಯೂ ರದ್ದಾಗಕೂಡದು” ಎಂದನು.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.


ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.


“ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.


“ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.


ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು