Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:2 - ಪರಿಶುದ್ದ ಬೈಬಲ್‌

2 ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್‌ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಹಷ್ವೇರೋಷನು ತನ್ನ ಆಳಿಕೆಯ ಮೂರನೆಯ ವರುಷ ಶೂಷನ್ ಕೋಟೆಯಲ್ಲಿನ ತನ್ನ ರಾಜಸಿಂಹಾಸನವನ್ನೇರಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:2
10 ತಿಳಿವುಗಳ ಹೋಲಿಕೆ  

ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್‌ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.


ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.


ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.


ಸೊಲೊಮೋನನು ಈಗ ರಾಜನ ಸಿಂಹಾಸನದ ಮೇಲೆ ಕುಳಿತಿದ್ದಾನೆ. ರಾಜನಾದ ದಾವೀದನು ಒಳ್ಳೆಯ ಕಾರ್ಯಮಾಡಿದನೆಂದು ಹೇಳಲು ರಾಜನ ಸೇವಕರೆಲ್ಲರೂ ಬಂದಿದ್ದಾರೆ. ‘ನಿನ್ನ ದೇವರು ಸೊಲೊಮೋನನನ್ನು ನಿನಗಿಂತಲೂ ಪ್ರಖ್ಯಾತನನ್ನಾಗಿ ಮಾಡಲಿ. ದೇವರು ಸೊಲೊಮೋನನ ರಾಜ್ಯವನ್ನು ನಿನ್ನ ರಾಜ್ಯಕ್ಕಿಂತಲೂ ಹೆಚ್ಚು ಬಲಿಷ್ಠಗೊಳಿಸಲಿ. ಅವನು ನಿನಗಿಂತಲೂ ಉತ್ತಮನಾಗಲಿ!’ ಎಂದು ಅವರು ಹೇಳುತ್ತಿದ್ದಾರೆ. ರಾಜನಾದ ದಾವೀದನೂ ಅಲ್ಲಿದ್ದನು. ಅವನು ತನ್ನ ಹಾಸಿಗೆಯಲ್ಲಿ ತಲೆಬಾಗಿಸಿಕೊಂಡು,


ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.


ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು