Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:20 - ಪರಿಶುದ್ದ ಬೈಬಲ್‌

20 ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅರಸರ ಈ ನಿರ್ಣಯವು ತಮ್ಮ ಹಿರಿಯರಿಂದ ಹಿಡಿದು ಕಿರಿಯರವರೆಗೂ ಎಲ್ಲಾ ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಗೌರವದಿಂದ ವರ್ತಿಸುವರು,” ಎಂದು ಸಲಹೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಮಾನ ಸಲ್ಲಿಸುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:20
8 ತಿಳಿವುಗಳ ಹೋಲಿಕೆ  

ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ.


ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.


ಸ್ತ್ರೀಯರೇ, ನೀವು ಪ್ರಭುವಿಗೆ ಅಧೀನರಾಗಿರುವಂತೆ ನಿಮ್ಮ ಗಂಡಂದಿರಿಗೂ ಅಧೀನರಾಗಿರಿ.


ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.


ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟ ಕೃತ್ಯಗಳನ್ನು ಮಾಡದಿರುವರು.


ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು.


ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು