ಎಸ್ತೇರಳು 1:21 - ಪರಿಶುದ್ದ ಬೈಬಲ್21 ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ಮಾತು ಅರಸನಿಗೂ ಅವನ ಸರದಾರರಿಗೂ - ಒಳ್ಳೇದೆಂದು ಕಂಡದರಿಂದ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.