22 ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.
22 ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
22 ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.
22 ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
22 ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.
ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.
ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.
ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.