Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:3 - ಪರಿಶುದ್ದ ಬೈಬಲ್‌

3 ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:3
16 ತಿಳಿವುಗಳ ಹೋಲಿಕೆ  

ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.


ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.


ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.


“ನೀನು ಎರಡು ಕೊಂಬುಗಳುಳ್ಳ ಒಂದು ಟಗರನ್ನು ನೋಡಿದೆ. ಆ ಕೊಂಬುಗಳು ಮೇದ್ಯಯ ಮತ್ತು ಪಾರಸಿಯ ರಾಜ್ಯಗಳು.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.


ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು