ಎಸ್ತೇರಳು 1:6 - ಪರಿಶುದ್ದ ಬೈಬಲ್6 ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗುಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”