Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:7 - ಪರಿಶುದ್ದ ಬೈಬಲ್‌

7 ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪಾನಪಾತ್ರೆಗಳು ಬಂಗಾರದವುಗಳೂ ನಾನಾ ಆಕಾರದವುಗಳೂ ಆಗಿದ್ದವು. ರಾಜದ್ರಾಕ್ಷಾರಸವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:7
6 ತಿಳಿವುಗಳ ಹೋಲಿಕೆ  

ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.


ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು