ಎಸ್ತೇರಳು 2:12 - ಪರಿಶುದ್ದ ಬೈಬಲ್12 ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕನ್ಯೆಯರ ಲೇಪನಕಾಲವು ಪೂರೈಸುವದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ ಪರಿಮಳ ದ್ರವ್ಯ ಕಾಂತಿವರ್ಧಕ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳೂ ಅಂತೂ ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜಸ್ತ್ರೀಯರ ವಿಷಯವಾದ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು. ಅಧ್ಯಾಯವನ್ನು ನೋಡಿ |
ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.