ಎಸ್ತೇರಳು 2:14 - ಪರಿಶುದ್ದ ಬೈಬಲ್14 ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು [ಮರುದಿನ] ಬೆಳಿಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರಿಸಿದರೆ ಹೊರತಾಗಿ ಒಬ್ಬಳೂ ಅರಸನ ಬಳಿಗೆ ತಿರಿಗಿ ಹೋಗುವ ಹಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು. ಅಧ್ಯಾಯವನ್ನು ನೋಡಿ |