ಎಸ್ತೇರಳು 2:15 - ಪರಿಶುದ್ದ ಬೈಬಲ್15 ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.