ಎಸ್ತೇರಳು 2:17 - ಪರಿಶುದ್ದ ಬೈಬಲ್17 ಎಲ್ಲಾ ಕನ್ಯೆಯರಿಗಿಂತ ರಾಜನು ಎಸ್ತೇರಳನ್ನು ಬಹಳವಾಗಿ ಪ್ರೀತಿಸಿದನು. ಆಕೆ ಅವನ ಮೆಚ್ಚಿಕೆಗೆ ಪಾತ್ರಳಾದಳು. ಎಲ್ಲಾ ಕನ್ಯೆಯರಲ್ಲಿ ಅವಳನ್ನು ಮಾತ್ರ ರಾಜನು ಹೆಚ್ಚಾಗಿ ಇಷ್ಟಪಟ್ಟನು. ಅರಸನಾದ ಅಹಷ್ವೇರೋಷನು ರಾಜ ಕಿರೀಟವನ್ನು ಆಕೆಯ ತಲೆಯ ಮೇಲಿರಿಸಿ ವಷ್ಟಿಯ ಬದಲಾಗಿ ಎಸ್ತೇರಳನ್ನು ತನ್ನ ರಾಣಿಯನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು. ಅಧ್ಯಾಯವನ್ನು ನೋಡಿ |