Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:19 - ಪರಿಶುದ್ದ ಬೈಬಲ್‌

19 ಕನ್ಯೆಯರು ಎರಡನೆ ಸಲ ಸಭೆ ಸೇರಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕನ್ಯೆಯರು ಎರಡನೆಯ ಸಾರಿ ಕೂಡಿಸಲ್ಪಡುತ್ತಿರುವಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಲಲ್ಲಿ ಕೂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:19
6 ತಿಳಿವುಗಳ ಹೋಲಿಕೆ  

ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.


ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.


ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.


ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು