Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:2 - ಪರಿಶುದ್ದ ಬೈಬಲ್‌

2 ಆಗ ರಾಜನ ಸನ್ನಿಧಿಸೇವಕರು ಈ ಸಲಹೆಕೊಟ್ಟರು: “ರಾಜನಿಗೋಸ್ಕರ ರೂಪವತಿಯರಾದ ಕನ್ಯೆಯರನ್ನು ಹುಡುಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅವನಿಗೆ, “ಅರಸರಿಗೋಸ್ಕರ ಸುಂದರ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಸೇವೆಮಾಡುತ್ತಿರುವ ರಾಜಪರಿವಾರದವರು ಅವನಿಗೆ ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವದಕ್ಕೆ ಅಪ್ಪಣೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:2
6 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನ್ನಿಕೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು.


ಅವರು ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಅವನನ್ನು ರಾಣಿ ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಕರೆದುಕೊಂಡು ಹೋಗಲು ಬಂದರು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು.


ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು