ಎಸ್ತೇರಳು 2:21 - ಪರಿಶುದ್ದ ಬೈಬಲ್21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು. ಅಧ್ಯಾಯವನ್ನು ನೋಡಿ |