ಎಸ್ತೇರಳು 2:22 - ಪರಿಶುದ್ದ ಬೈಬಲ್22 ಮೊರ್ದೆಕೈಗೆ ಈ ವಿಷಯ ಗೊತ್ತಾದಾಗ ಅವನು ಅದನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ವಿಷಯ ಮೊರ್ದೆಕೈಗೆ ತಿಳಿದುಬಂದಾಗ, ಆತನು ಎಸ್ತೇರಳಿಗೆ ತಿಳಿಸಿದನು. ರಾಣಿಯು ಅವನ ಹೆಸರನ್ನು ಅರಸನಿಗೆ ಹೇಳಿ ಅವರು ನಡೆಸುತ್ತಿದ್ದ ಆ ಪಿತೂರಿ ಬಗ್ಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್‍ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು. ಅಧ್ಯಾಯವನ್ನು ನೋಡಿ |
ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.