ಎಸ್ತೇರಳು 2:23 - ಪರಿಶುದ್ದ ಬೈಬಲ್23 ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.