5 ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.
ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.
ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.