Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:9 - ಪರಿಶುದ್ದ ಬೈಬಲ್‌

9 ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:9
12 ತಿಳಿವುಗಳ ಹೋಲಿಕೆ  

ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.


ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು.


ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ.


ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.


ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.


ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.


ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.


ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು