Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:1 - ಪರಿಶುದ್ದ ಬೈಬಲ್‌

1 ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:1
15 ತಿಳಿವುಗಳ ಹೋಲಿಕೆ  

ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.


ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು.


ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.


ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.


ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದುಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.


ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.


ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.


ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು.


ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.


ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು