Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:11 - ಪರಿಶುದ್ದ ಬೈಬಲ್‌

11 ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟಬಂದ ಹಾಗೆ ಮಾಡಬಹುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:11
6 ತಿಳಿವುಗಳ ಹೋಲಿಕೆ  

ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ನಾನಂತೂ ನಿಮ್ಮ ಅಧಿನದಲ್ಲಿದ್ದೇನೆ. ನಿಮಗೆ ಒಳ್ಳೆಯದಾಗಿಯೂ ನ್ಯಾಯವಾಗಿಯೂ ತೋರಿದ್ದನ್ನು ಮಾಡಿರಿ.


ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.


ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು