14 ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು.
14 ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.
ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.