Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:15 - ಪರಿಶುದ್ದ ಬೈಬಲ್‌

15 ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:15
14 ತಿಳಿವುಗಳ ಹೋಲಿಕೆ  

ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.


ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.


ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.


ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.


ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು