ಎಸ್ತೇರಳು 3:7 - ಪರಿಶುದ್ದ ಬೈಬಲ್7 ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು. ಅಧ್ಯಾಯವನ್ನು ನೋಡಿ |