Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:9 - ಪರಿಶುದ್ದ ಬೈಬಲ್‌

9 “ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:9
7 ತಿಳಿವುಗಳ ಹೋಲಿಕೆ  

ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ರಾಜನು ತನ್ನ ಹಣವನ್ನು ವಸೂಲಿ ಮಾಡುವುದಕ್ಕೆ ಪ್ರಾರಂಭಿಸಿದನು. ಒಬ್ಬ ಸೇವಕನು ಹತ್ತು ಸಾವಿರ ಬೆಳ್ಳಿಯ ನಾಣ್ಯಗಳನ್ನು ರಾಜನಿಗೆ ಸಾಲ ಕೊಡಬೇಕಿತ್ತು.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.


ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.


ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.


ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು