ಎಸ್ತೇರಳು 4:1 - ಪರಿಶುದ್ದ ಬೈಬಲ್1 ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?