ಎಸ್ತೇರಳು 4:14 - ಪರಿಶುದ್ದ ಬೈಬಲ್14 ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.
“ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.
ಆಗ ಎಸ್ತೇರಳು ಈ ಉತ್ತರವನ್ನು ಮೊರ್ದೆಕೈಗೆ ಕಳುಹಿಸಿದಳು: “ಮೊರ್ದೆಕೈ, ನೀನು ಹೋಗಿ ಶೂಷನ್‌ನಲ್ಲಿರುವ ಎಲ್ಲಾ ಯೆಹೂದ್ಯರನ್ನು ಒಟ್ಟಿಗೆ ಸೇರಿಸಿ ನನಗಾಗಿ ಉಪವಾಸವಿರಲು ಅವರಿಗೆ ಹೇಳು. ಮೂರು ದಿನ ಹಗಲುರಾತ್ರಿ ಊಟಮಾಡಲೂಬಾರದು ಕುಡಿಯಲೂಬಾರದು. ನಾನೂ ನಿಮ್ಮ ಹಾಗೆ ಉಪವಾಸದಿಂದಿರುವೆನು. ನನ್ನೊಂದಿಗೆ ನನ್ನ ಸೇವಕಿಯರೂ ಉಪವಾಸ ಮಾಡುವರು. ನಾವು ಉಪವಾಸ ಮಾಡಿದ ಬಳಿಕ ನಾನು ರಾಜನ ಬಳಿಗೆ ಹೋಗುವೆನು. ಆತನು ಕರೆಯದೆ ನಾನು ಆತನ ಬಳಿಗೆ ಹೋಗುವುದು ನ್ಯಾಯಬಾಹಿರ. ಆದರೂ ನಾನು ಹೋಗುವೆನು, ನಾನು ಸಾಯಬೇಕಾದರೆ ಸಾಯುವೆನು.”