ಎಸ್ತೇರಳು 4:3 - ಪರಿಶುದ್ದ ಬೈಬಲ್3 ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.