Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:6 - ಪರಿಶುದ್ದ ಬೈಬಲ್‌

6 ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹತಾಕನು ಅರಮನೆಯ ಬಾಗಲಿನ ಮುಂದಿರುವ ಪಟ್ಟಣದ ಬೈಲಿಗೆ ಮೊರ್ದೆಕೈಯ ಹತ್ತಿರ ಹೋದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:6
5 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.


ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.


ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್‌ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.


ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.


ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು